ಉಳ್ಳಾಲ, ಆ 12 (DaijiworldNews/HR): ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರಲ್ಲಿ ಮಗನೊಂದಿಗೆ ಸಹಸವಾರರಾಗಿ ತೆರಳುತ್ತಿದ್ದ ತಂದೆ ದಾರುಣವಾಗಿ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ಶನಿವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಅಳೇಕಲ ನಿವಾಸಿ ಅಬ್ಬಾಸ್(58) ಎಂದು ಗುರುತಿಸಲಾಗಿದೆ.
ಅಬ್ಬಾಸ್ ಅವರು ಶನಿವಾರ ಬೆಳಿಗ್ಗೆ ಮಗ ನೌಶಾದ್ ಜತೆ ಸ್ಕೂಟರ್ ನಲ್ಲಿ ದೇರಳಕಟ್ಟೆಗೆ ತೆರಳುತ್ತಿದ್ದರು. ಈ ಸಂದರ್ಭ ಚೆಂಬುಗುಡ್ಡೆ ಬಳಿ ಕಾರ್ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ
ರಭಸಕ್ಕೆ ಸ್ಕೂಟರ್ ಸವಾರರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ಅಬ್ಬಾಸ್ ಅವರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಗಂಭೀರ ಗಾಯಗೊಂಡ ನೌಶಾದ್ನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.