ಬಂಟ್ವಾಳ, ಆ 13 (DaijiworldNews/SM): ಎನ್ಐಎ ಪೊಲೀಸರು ಹೈದರಾಬಾದ್ ನಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲೆಯಲ್ಲಿ ಒಟ್ಟು 5 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
ಬಂಟ್ವಾಳದ ಎರಡು ಮನೆಗಳಿಗೆ ದಾಳಿ ನಡೆಸಿದ್ದಾರೆ. ಸಹಿತ ದ.ಕ.ಜಿಲ್ಲೆಯಲ್ಲಿ ಒಟ್ಟು 5 ಮಂದಿಯ ಮನೆಗಳಿಗೆ ರವಿವಾರ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೈದರಾಬಾದ್ ನಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಟ್ವಾಳ ತಾಲೂಕಿನ ಬೋಗೊಡಿ ನಿವಾಸಿ ಇಬ್ರಾಹಿಂ ನಂದಾವರ ಹಾಗೂ ಕುಂಪಣಮಜಲು ನಿವಾಸಿಯಾಗಿದ್ದ ಪ್ರಸ್ತುತ ವಳಚ್ಚಿಲ್ ನಿವಾಸಿಯಾಗಿರುವ ಮುಸ್ತಾಕ್ ಎಂಬವರ ಮನೆಗೆ ದಾಳಿ ನಡೆಸಿದ ಎನ್ಐಎ ಪೋಲೀಸರು ಅಗತ್ಯ ದಾಖಲೆಗಳನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ದ.ಕ. ಜಿಲ್ಲೆ ಮಾತ್ರವಲ್ಲದೆ, ದೇಶದೆಲ್ಲೆಡೆ ಒಟ್ಟು 5 ರಾಜ್ಯಗಳಲ್ಲಿ ಎನ್.ಐ.ಎ ದಾಳಿ ನಡೆಸಿದ ಬಗ್ಗೆ ಮಾಹಿತಿ ಲಭ್ಯವಾಗಿದೆ.