ಬಂಟ್ವಾಳ, ಆ 16 (DaijiworldNews/SM): ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳ ಕಡೆಗೆ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ವಿಟ್ಲ ಪೋಲಿಸರು ಬಂಧಿಸಿದ ಘಟನೆ ಜು 16ರಂದು ಮುಂಜಾನೆ ನಡೆದಿದೆ. ಬಂಧಿತರಿಂದ 5 ಜಾನುವಾರು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಮಂಜೇಶ್ವರ ಬಾಕ್ರಬೈಲು ನಿವಾಸಿ ಇಬ್ರಾಹಿಂ ಯಾನೆ ಮೋನು, ಮಂಜೇಶ್ವರ ಬಾಕ್ರಬೈಲು ನಿವಾಸಿ ಮೂಸಾ, ಬಂಟ್ವಾಳ ಕನ್ಯಾನ ಗ್ರಾಮದ ನಿವಾಸಿ ಹಮೀದ್ ಯಾನೆ ಜಲಾಲ್ ಹಾಗೂ ಸಾಲೆತ್ತೂರಿನ ಹಮೀದ್ ಬಂಧಿತ ಆರೋಪಿಗಳು.
ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕೆಎ-19-ಎಬಿ-1793 ಎಂಬ ಗೂಡ್ಸ್ ವಾಹನದಲ್ಲಿ 5 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳ ಕಡೆಗೆ ಮಾಂಸಕ್ಕಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದರು ಎಂದು ಆರೋಪಿಸಲಾಗಿದೆ.
ಆರೋಪಿಗಳ ವಿರುದ್ಧ ಕಲಂ: 5,6,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ-2020 ಹಾಗೂ 11(1)(ಎ),11(1)(ಡಿ) ಪ್ರಾಣಿ ಹಿಂಸೆ ನಿಷೇಧ ಕಾಯ್ದೆ 1960 ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.