ಉಡುಪಿ, ಆ 16 (DaijiworldNews/MS): ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ(ಸಿಐಡಿ) ತನ್ನ ಮೊದಲ ಹಂತದ ತನಿಖೆಯನ್ನು ಪೂರ್ಣಗೊಳಿಸಿ ಅಧಿಕಾರಿಗಳು ಬೆಂಗಳೂರಿಗೆ ತೆರಳಿದ್ದಾರೆ.
ತನಿಖಾಧಿಕಾರಿ(ಐಒ) ಸಿಐಡಿ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತನಿಖಾ ತಂಡ, ಈಗಾಗಲೇ ಉಡುಪಿಯ ನೇತ್ರ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ನಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ ಮತ್ತು ಸಂತ್ರಸ್ತೆ, ಆರೋಪಿಗಳು ಹಾಗೂ ಕಾಲೇಜು ಆಡಳಿತ ಮಂಡಳಿಯ ಪ್ರತಿನಿಧಿಗಳ ಹೇಳಿಕೆ ದಾಖಲಿಸಿದೆ ಎಂದು ಅವರು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ವಿಧಿ-ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದ ಆರೋಪಿ ವಿದ್ಯಾರ್ಥಿನಿಯರಿಂದ ವಶಪಡಿಸಿಕೊಂಡ ಮೂರು ಮೊಬೈಲ್ ಪೋನ್, ಸಿಸಿಟಿವಿ ದೃಶ್ಯಾವಳಿ ಸಹಿತ ಕೆಲ ತಾಂತ್ರಿಕ ವಿಚಾರಗಳ ಎಫ್ಎಸ್ಎಲ್ ವರದಿಗೆ ಸಿಐಡಿ ಅಧಿಕಾರಿಗಳು ಕಾಯುತ್ತಿದ್ದು, ಈ ವರದಿ ಕೆಲವೇ ದಿನಗಳಲ್ಲಿ ಸಿಐಡಿಗೆ ಸಿಗಲಿದೆ ಎ ಂದು ಮೂಲಗಳಿಂಡ ತಿಳಿದುಬಂದಿದೆ.
ಘಟನೆಯ ಬಗ್ಗೆ ಸಂತ್ರಸ್ತೆ ಅಧಿಕೃತವಾಗಿ ದೂರು ನೀಡದಿದ್ದರೂ, ಉಡುಪಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಡಿವೈಎಸ್ಪಿ ಮಟ್ಟದ ತನಿಖೆ ಪ್ರಾರಂಭಿಸಿದ್ದರು. ಆದರೆ ಬಿಜೆಪಿ ಪ್ರತಿಭಟನೆ ಮುಂದುವರಿಸಿದ ನಂತರ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ.