ಉಡುಪಿ, ಆ 18(DaijiworldNews/MS): ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಅಧಿಕಾರಿಗಳ ತಂಡ ಮೊದಲನೇ ಹಂತದ ತನಿಖೆ ಮುಗಿಸಿ ಬೆಂಗಳೂರಿಗೆ ತೆರಳಿದ್ದು ಎಫ್ಎಸ್ಎಲ್ ವರದಿಯ ನಿರೀಕ್ಷೆಯಲ್ಲಿದ್ದಾರೆ.
ಈಗಾಗಲೆ ಉಡುಪಿಯಲ್ಲೂ ತನಿಖೆ ನಡೆಸಿ ಹೇಳಿಕೆಗಳನ್ನು ಸಿಐಡಿ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಮೂರು ವಾರಗಳಹಿಂದೆ ವಿದ್ಯಾರ್ಥಿನಿಯರು ಮೊಬೈಲ್ ಫೋನ್ ಗಳನ್ನು ಬೆಂಗಳೂರಿಗೆ ಎಫ್ ಎಸ್ ಎಲ್ ವರದಿಗೆ ಕಳುಹಿಸಲಾಗಿತ್ತು.
ಎಫ್ಎಸ್ಎಲ್ ಅಧಿಕಾರಿಗಳು ವಿಡಿಯೋ ಫೋಟೋ ರಿಟ್ರೈವ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ವಿಡಿಯೋ ಫೋಟೋ ಹಿಂಪಡೆಯಲಾಗದಿದ್ದರೆ ಗುಜರಾತ್ಗೆ ಫೋನ್ಗಳನ್ನು ರವಾನಿಸಲು ಚಿಂತನೆ ನಡೆದಿದೆ. ಗುಜರಾತ್ನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ವಿಡಿಯೋ ರಿಟ್ರೈವ್ ಮಾಡಿಸಲಾಗುತ್ತೆ. ಒಂದೆರಡು ದಿನದಲ್ಲಿ ಗುಜರಾತ್ಗೆ ಫೋನ್ಗಳನ್ನು ರವಾನಿಸುವ ಸಾಧ್ಯತೆ ಇದೆ. ಗುಜರಾತ್ನ ಫೋರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ ಮೂಲಕ ಫೋನ್ ರಿಟ್ರೈವ್ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.