ಮಂಗಳೂರು, ಎ09(SS): ಈ ಬಾರಿಯ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದೇ ಇಲ್ಲ. ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಬರಬಾರದು ಎಂದು ಮಾಜಿ ಸಚಿವ ರಮಾನಾಥ್ ರೈ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದೇ ಇಲ್ಲ. ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಬರಬಾರದು, ಒಂದು ವೇಳೆ ಬಂದರೆ ಅದರಿಂದ ದೇಶದ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಅಪಾಯ ಖಂಡಿತ. ಚುನಾವಣೆ ಬರುವ ವೇಳೆ ರಸ್ತೆಯಲ್ಲಿ ನಿಂತು ಮೋದಿ ಮೋದಿ ಎಂದು ಕೂಗುವ ಬಿಜೆಪಿ ಕಾರ್ಯಕರ್ತರ ಮನೆಯಲ್ಲಿ ಬೇಯುತ್ತಿರುವುದು ರಾಜ್ಯ ಸರಕಾರದ ಅನ್ನ ಭಾಗ್ಯದ ಅಕ್ಕಿ ಎಂದು ಹೇಳಿದರು.
ಈ ಚುನಾವಣೆ ಸಂವಿಧಾನದ ಅಳಿವು-ಉಳಿವಿನ ಪ್ರಶ್ನೆಯಾಗಿದೆ. ನರೇಂದ್ರ ಮೋದಿ ಸಮಾಜವನ್ನು ವಿಭಜಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ದೇಶದ ಪ್ರಧಾನಿಯೇ ಸಮಾಜವನ್ನು ಒಡೆಯುವ ಹೇಳಿಕೆ ನೀಡಿದರೆ ಈ ಸಮಾಜ ಎಲ್ಲಿಗೆ ಹೋಗಿ ತಲುಪಬಹುದು ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ ಈ ಬಾರಿಯ ಚುನಾವಣಾ ಪ್ರಚಾರಕ್ಕೆ ವಿಷಯವೇ ಇಲ್ಲ. ಅವರು ಕೇವಲ ಮತ್ತೊಮ್ಮೆ ಮೋದಿ. ಮತ್ತೊಮ್ಮೆ ಮೋದಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಆದರೆ, ಅವರ ಮನೆಯಲ್ಲಿ ಬೇಯುತ್ತಿರುವುದು ಮಾತ್ರ ಈ ಹಿಂದಿನ ಸಿದ್ದರಾಮಯ್ಯ ಸರಕಾರದ ಅನ್ನಭಾಗ್ಯದ ಅಕ್ಕಿ ಎಂದು ಕಿಡಿಕಾರಿದರು.
ಈ ಚುನಾವಣೆ ಯಾರೊಬ್ಬರ ಶಕ್ತಿ ಪ್ರದರ್ಶನವಲ್ಲ. ದೇಶದ ಭವಿಷ್ಯವನ್ನು ರೂಪಿಸುವ ಮತ್ತು ತೀರ್ಮಾನ ಮಾಡುವ ಚುನಾವಣೆ. ಈ ದೇಶಕ್ಕೆ ಯಾರು ಬೇಕು...? ಯಾರು ಬೇಡ...? ಎಂಬ ನಿರ್ಧಾರವನ್ನು ಮುಂದಿಟ್ಟುಕೊಂಡು ಈ ಚುನಾವಣೆ ಎದುರಿಸುತ್ತಿದ್ದೇವೆ ಎಂದು ಹೇಳಿದರು.