ಮಂಗಳೂರು, ಆ 20 (DaijiworldNews/SM): ಸೌಜನ್ಯ ಸಾವಿನ ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕದ್ರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಸೌಜನ್ಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು. ಅಲ್ಲದೆ, ಪ್ರಕರಣವನ್ನು ಮರುತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿದರು.