ಬಂಟ್ವಾಳ, ಆ 21 (DaijiworldNews/SM): ಕೊಟ್ಯಾಂತರ ರೂ. ಮೌಲ್ಯದ ಅಕ್ಕಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಸುದ್ದಿಯಾಗಿದ್ದ ಬಿಸಿರೋಡಿನ ತಲಪಾಡಿ ಅಕ್ಕಿ ತಲಪಾಡಿ ಗೊಡೌನ್ ಗೆ ರಾಜ್ಯ ಮಟ್ಟದ ಅಧಿಕಾರಿಗಳು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಡಿತರ ಚೀಟಿ ಫಲಾನುಭವಿಗಳಿಗಾಗಿ ವಿತರಿಸಬೇಕಾಗಿದ್ದ ಅಕ್ಕಿ ದಾಸ್ತಾನು ಕೇಂದ್ರದಿಂದ ಕೋಟ್ಯಾಂತರ ರೂ ಮೌಲ್ಯದ ಅಕ್ಕಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ದೂರಿನ ಹಿನ್ನೆಲೆಯಲ್ಲಿ ಹಾಗೂ ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿ ಅವರಿಗೆ ನೀಡಿದ ದೂರಿನಂತೆ ಹಾಗೂ ದೊಡ್ಡ ಮಟ್ಟದ ಅವ್ಯವಹಾರದ ಆರೋಪ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲೈಮುಗಿಲನ್ ಹಾಗೂ ಎಸ್.ಪಿ.ಸಿ.ಬಿ.ರಿಷ್ಯಂತ್ ಅವರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ನೀಡಲು ಸೂಚನೆ ನೀಡಿದ್ದೆನೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದರು.ಅ ಬಳಿಕ ಮುಂದಿನ ಕ್ರಮದ ಬಗ್ಗೆ ಮತ್ತು ಸ್ಪಷ್ಟವಾದ ಚಿತ್ರಣ ಸಿಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದರು.ಅದರಂತೆ ಇಂದು
ಕೆ.ಎಫ್.ಸಿ.ಎಸ್.ಸಿ.ಯ ಜನರಲ್ ಮ್ಯಾನೇಜರ್ ಪ್ರಸನ್ನ ಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿ ಅನುರಾಧ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ತಹಶಿಲ್ದಾರ್ ಎಸ್.ಬಿ.ಕೂಡಲಗಿ, ನಗರ ಪೋಲೀಸ್ ಠಾಣೆಯ ಎಸ್.ಐ.ರಾಮಕೃಷ್ಣ ಉಪಸ್ಥಿತರಿದ್ದರು