ಸುಳ್ಯ, ಆ 22 (DaijiworldNews/MS): ರಬ್ಬರ್ ಟ್ಯಾಪಿಂಗ್ ಮಾಡುತ್ತಾ ಜೀವನ ಸಾಗಿಸುತ್ತಿದ್ದ್ದ ತಮಿಳುನಾಡು ಮೂಲದ ದಂಪತಿ ಎಲಿಮಲೆಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ. 22ರ ಮಂಗಳವಾರ ವರದಿಯಾಗಿದೆ.
ಮೃತರನ್ನು ತಮಿಳುನಾಡು ಮೂಲದ ರಾಜನ್ ಮತ್ತು ಅವರ ಪತ್ನಿ ಎಂದು ಗುರುತಿಸಲಾಗಿದೆ.
ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ಈ ದಂಪತಿಗಳು ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ. ರಾಜನ್ ಕೆಲ ಸಮಯದಿಂದ ಆನಾರೋಗ್ಯಕ್ಕೆ ತುತ್ತಾಗಿದ್ದರು ಎನ್ನಲಾಗಿದೆ.
ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು, ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821