ಮಂಗಳೂರು, ಆ 22 (DaijiworldNews/HR): ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನ್ಯ ಕೋಮಿನ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿದವರ ವಿರುದ್ದ ಕಾವೂರು ಪೊಲೀಸರು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳನ್ನು ಬಂಧಿಸಿದ್ದಾರೆ.
ಚರಣ್ ರಾಜ್ ( 23), ಸುಮಂತ್ ಬರ್ಮನ್ (24), ಅವಿನಾಶ (24) ಬಂಧಿತ ಆರೋಪಿಗಳು.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್.ವಿ.ಶೆಟ್ಟಿ ಕಾಲೇಜು ರೋಡ್ ಬಳಿ ವ್ಯಕ್ತಿಯೊಬ್ಬರು ನಡೆದುಕೊಂಡು ಮನೆಗೆ ಹೋಗುತ್ತಿರುವಾಗ ಉರುಂದಾಡಿ ಗುಡ್ಡೆಯ ಚರಣ್, ಸುಮಂತ್ ಬರ್ಮನ್ ಹಾಗೂ ಕೋಡಿಕಲ್ ನ ಅವಿನಾಶ್ ಎಂಬವರು ಸ್ಕೂಟಿಯಲ್ಲಿ ಬಂದು ಅಡ್ಡಹಾಕಿ ತಡೆದು ತಲವಾರು ಬಿಸಿದ್ದು, ಅದೃಷ್ಟವಶ ಅನ್ಯ ಕೋಮಿನ ವ್ಯಕ್ತಿಯು ತಪ್ಪಿಸಿಕೊಂಡಿದ್ದಾರೆ. ಆದರೆ ಮುಖಕ್ಕೆ ಗಾಯವಾಗಿರುತ್ತದೆ.
ಇನ್ನು ಕಾವೂರು ಪೊಲೀಸರು ಕಾರ್ಯಪ್ರವತ್ತರಾಗಿ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪ್ರಕರಣವನ್ನು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಐ.ಪಿ.ಎಸ್, ಡಿಸಿಪಿಗಳಾದ ಅಂಶು ಕುಮಾರ್, ದಿನೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಎಸಿಪಿ ಮನೋಜ್ ಕುಮಾರ್ ರವರ ಸಲಹೆಯಂತೆ ಪ್ರಕರಣದ ತನಿಖೆಯನ್ನು ಕೈಗೊಂಡು, ಕೃತ್ಯಕ್ಕೆ ಬಳಸಿದ ತಲವಾರು, ವಾಹನವನ್ನು ಮತ್ತು ಆರೋಪಿತರನ್ನು ಬಂಧಿಸುವಲ್ಲಿ ಕಾವೂರು ಠಾಣಾ ಪೊಲೀಸರು ಬಂಧಿಸುವ ಕಾರ್ಯದಲ್ಲಿ ಪಾಲ್ಗೊಂಡಿರುತ್ತಾರೆ.