ಪುತ್ತೂರು, ಆ 23 (DaijiworldNews/HR): ಪುತ್ತೂರು ತಾಲೂಕಿನ ಬಡಗನ್ನೂರು ಎಂಬಲ್ಲಿ ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಡೆದಿದ್ದು, ಹಲ್ಲೆಯಿಂದ ಅಸ್ವಸ್ಥಗೊಂಡ ಮಹಿಳೆಯರಿಬ್ಬರನ್ನು ಪುತ್ತೂರು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಡಗನ್ನೂರು ನಿವಾಸಿ ಸುಲೇಖ ಮತ್ತು ಅವರ ಮನೆಗೆ ಕೆಲಸಕ್ಜೆ ಬಂದ ಗಿರಿಜಾ ಹಲ್ಲೆಗೊಳಗಾದವರು. ಸುರೇಶ್ ನಾಯ್ಕ ಎಂಬಾತ ಆರೋಪಿ.
ಮಹಿಳೆಯರಿಬ್ಬರು ಗುಡ್ಡೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಸುಲೇಖ ಅವರ ದೂರದ ಸಂಬಂಧಿ ಸುರೇಶ್ ನಾಯ್ಕ ಬಂದು ಸುಲೇಖ ಅವರ ಕುತ್ತಿಗೆ ಬಟ್ಟೆ ಸುತ್ತಿ ಕೊಲೆಗೆ ಯತ್ನಿಸಿದ್ದಾರೆನ್ನಲಾಗಿದೆ. ಇದನ್ನು ನೋಡಿದ ಕೆಲಸಾಕೆ ಗಿರಿಜಾ ಅವರಿಗೂ ಆತ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.
ಇನ್ನು ಗಾಯಾಳುಗಳಿಬ್ಬರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಇಬ್ಬರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿ ಸುರೇಶ್ ನಾಯ್ಕ ಎಂಬಾತನು ಸುಲೇಖ ಅವರ ಮನೆಯಲ್ಲಿದ್ದ ನಗದು ಚಿನ್ನಾಭರಣಗಳನ್ನು ದೋಚುವ ಉದ್ದೇಶದಿಂದ ಸುಲೇಖ ಹಾಗೂ ಕೆಲಸದಾಳು ಗಿರಿಜಾ ರವರಿಗೆ ಹಲ್ಲೆ ನಡೆಸಿ ಬೈರಾಸಿನಲ್ಲಿ ಕುತ್ತಿಗೆಯನ್ನು ಬಿಗಿದು ಹಣ ಹಾಗೂ ಚಿನ್ನಾಭರಣಗಳ ಬಗ್ಗೆ ವಿಚಾರಿಸಿ, ಕೊಲೆ ಮಾಡಲು ಪ್ರಯತ್ನಿಸಿದ್ದಾನೆ ಎಂಬುದಾಗಿ ಸುಲೇಖ ಅವರ ಸಂಬಂಧಿ ರವಿಚಂದ್ರ (35) ಎಂಬವರು ದೂರಿನಲ್ಲಿ ಉಲ್ಲೇಖೆಸಿದ್ದಾರೆ.
ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿಅಕ್ರ 77-2023 ಕಲಂ: 394 ಐ ಪಿ ಸಿ. ಯಂತೆ ಪ್ರಕರಣ ದಾಖಲಿಕೊಂಡು ತನಿಖೆ ನಡೆಸಲಾಗುತ್ತಿದೆ.