ಬಂಟ್ವಾಳ, ಏ 09(MSP): ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಇವರು ಏ. 9 ರ ಬುಧವಾರ ಮಧ್ಯಾಹ್ನ ಬಂಟ್ವಾಳ ಸರಕಾರಿ ಆಸ್ಪತ್ರೆ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
"ಈ ಸರಕಾರಿ ಆಸ್ಪತ್ರೆ ಗೆ ಚಿಕಿತ್ಸೆ ಗಾಗಿ ತೆರಳಿದ ರೋಗಿಯೋರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡದೆ ಆಸ್ಪತ್ರೆಯ ಕರ್ತವ್ಯದಲ್ಲಿದ್ದ ನರ್ಸ್ ದರ್ಪದ ಮಾತುಗಳನ್ನಾದ್ದಾರೆ ರೋಗಿಯೂ ಚಿಕಿತ್ಸೆಗಾಗಿ ಅಂಗಲಾಚುತ್ತಿದ್ದಾರೆ. ಹಾಗಾಗಿ ಈ ಸರಕಾರಿ ಆಸ್ಪತ್ರೆ ಗೆ ಒಮ್ಮೆ ಬಂಟ್ವಾಳ ಶಾಸಕರು ಬೇಟಿ ನೀಡಿ ಮಾಹಿತಿ ಪಡೆಯಬೇಕು ನೊಂದ ನಾಗರೀಕ " ಎಂಬ ತಲೆಬರಹದ ಸಂದೇಶವೊಂದು ಮಂಗಳವಾರದಿಂದ ನಿರಂತರವಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಬುಧವಾರ ಮಧ್ಯಾಹ್ನ ಬಂಟ್ವಾಳ ಸರಕಾರಿ ಆಸ್ಪತ್ರೆ ಗೆ ಬೇಟಿ ನೀಡಿ ರೋಗಿಗಳ ಜೊತೆ ಮಾತನಾಡಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಜರಿದ್ದರು.