ಉಡುಪಿ, ಆ 23 (DaijiworldNews/SM): ಚಂದ್ರನ ದಕ್ಷಿಣ ದ್ರುವಕ್ಕೆ ವಿಕ್ರಮ ಸೇಫ್ ಲ್ಯಾಂಡ್ ಆಗಿದೆ. ಈ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ನಗರದಲ್ಲಿ ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.
ಉಡುಪಿ ಜಿಲ್ಲಾ ನಾಗರಿಕ ಸಮಿತಿ ಹಾಗೂ ಜೋಸ್ ಅಲುಕ್ಕಾಸ್ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು. ಬೃಹತ್ ರಾಷ್ಟ್ರಧ್ವಜದೊಂದಿಗೆ ಕುಣಿದು ಕುಪ್ಪಳಿಸಿದರು. ನಾಸಿಕ್ ಬ್ಯಾಂಡ್ ಚೆಂಡೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಅಲ್ಲದೆ, ಸಾರ್ವಜನಿಕರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.