ಉಡುಪಿ, ಆ 24 (DaijiworldNews/MS): ಶಿರ್ವ ಗ್ರಾ.ಪಂ. ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಆ. 23 ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ವಿಲ್ಸನ್ ರೊಡ್ರಿಗಸ್ ಆಯ್ಕೆಯಾಗಿದ್ದಾರೆ. ಇಬ್ಬರೂ ಕಾಂಗ್ರೆಸ್ ಬೆಂಬಲಿತರಾಗಿದ್ದಾರೆ.
ಅಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.
34 ಸದಸ್ಯಬಲದ ಶಿರ್ವ ಗ್ರಾ.ಪಂ. ನಲ್ಲಿ 20 ಮಂದಿ ಕಾಂಗ್ರೆಸ್ ಬೆಂಬಲಿತರು ಮತ್ತು 14 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸವಿತಾ ಪೂಜಾರಿ 20 ಮತ ಮತ್ತು ಆಶಾ ಆಚಾರ್ಯ 14 ಮತ ಗಳಿಸಿದ್ದಾರೆ. ಉಪಾಧ್ಯಕ್ಷ ವಿಲ್ಸನ್ ರೊಡ್ರಿಗಸ್ 19 ಮತ ಗಳಿಸಿದ್ದು ಬಿಜೆಪಿ ಬೆಂಬಲಿತ ರಾಜೇಶ್ ಶೆಟ್ಟಿ 15 ಮತ ಗಳಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಒಂದು ಅಡ್ಡ ಮತದಾನವಾಗಿದೆ.
ಉಡುಪಿ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಕೆ.ಪಿ.ಗಿರೀಶ್ ಚುನಾವಣಾಧಿಕಾರಿಯಾಗಿದ್ದರು. ಗ್ರಾ.ಪಂ. ಪಿಡಿಒ ಅನಂತಪದ್ಮನಾಭ ನಾಯಕ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಸುವರ್ಣ, ಮುಖಂಡರಾದ ಪ್ರಶಾಂತ್ ಜತ್ತನ್ನ, ಸುನೀಲ್ ಬಂಗೇರಾ, ಶರ್ಫುದ್ದೀನ್ ಶೇಖ್, ಇಗ್ನೇಶಿಯಸ್ ಡಿಸೋಜಾ, ಯುವ ಕಾಂಗ್ರೆಸ್ ಅಧ್ಯಕ್ಷ ಮೆಲ್ವಿನ್ ಡಿಸೋಜಾ, ಮಾಜಿ ಗ್ರಾ.ಪಂ.ಅಧ್ಯಕ್ಷ ಹಸನಬ್ಬ ಶೇಖ್, ಕೆ.ಆರ್.ಪಾಟ್ಕರ್, ರತನ್ ಕುಮಾರ್ ಶೆಟ್ಟಿ ಮಾಜಿ ಉಪಾಧ್ಯಕ್ಷೆ ಗ್ರೇಸಿ ಕಾರ್ಡೋಜಾ ಮತ್ತು ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.