ಪುತ್ತೂರು, ಆ 24 (DaijiworldNews/HR): ವ್ಯಬೈಕ್ನಲ್ಲಿ ಬಂದ ಯುವಕಯೊಬ್ಬ ಯುವತಿಗೆ ಚೂರಿಯಿಂದ ಇರಿದಿರುವ ಘಟನೆ ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಆ.24ರ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎಂದು ತಿಳಿದು ಬಂದಿದೆ.
ಸದ್ಯ ಚೂರಿ ಇರಿದ ಪದ್ಮರಾಜ್ ಎಂಬಾತನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಮಾಹಿತಿ ನೀಡಿದ್ದಾರೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವಕನೋರ್ವ ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆ ಯತ್ನ ನಡೆಸಿದ್ದು, ಗಂಭೀರ ಗಾಯಗೊಂಡ ಯುವತಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.