ಮಂಗಳೂರು, ಆ 25 (DaijiworldNews/MS): ನಿಷೇಧಿತ ಇ-ಸಿಗರೇಟ್ ಮಾರಾಟ ಹಾಗೂ ವಿದೇಶಿ ಸಿಗರೇಟ್ಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ ನಗರದ ಮೂರು ಅಂಗಡಿಗಳ ಟ್ರೇಡ್ ಲೈಸನ್ಸ್ ರದ್ದುಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ಮಹಾನಗರ ಪಾಲಿಕೆಗೆ ಪೊಲೀಸರು ಪತ್ರ ಬರೆದಿದ್ದಾರೆ.
ಆ.21ರಂದು ನಗರದ ಲಾಲ್ಬಾಗ್ನ ಸಾಯಿಬೀನ್ ಕಾಂಪ್ಲೆಕ್ಸ್ನ ಮೂರು ಅಂಗಡಿಗಳಿಗೆ ದಾಳಿ ನಡೆಸಿದ್ದ ಬರ್ಕೆ ಪೊಲೀಸರು 2.70 ಲಕ್ಷ ರೂ. ಮೌಲ್ಯದ ಇ-ಸಿಗರೇಟ್ ಮತ್ತು ವಿದೇಶಿ ಸಿಗರೇಟ್ಗಳನ್ನು ವಶಪಡಿಸಿಕೊಂಡು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಈ ಆರೋಪಿಗಳು ಹಿಂದೆಯೂ ಅಂಗಡಿಗಳಲ್ಲಿ ಇ-ಸಿಗರೇಟ್ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೂ ಆರೋಪಿಗಳು ಮಾರಾಟ ಮುಂದುವರಿಸಿರುವುದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಈ ಮೂರು ಅಂಗಡಿಗಳ ಟ್ರೇಡ್ ಲೈಸನ್ಸ್ ರದ್ದುಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ಮಹಾನಗರ ಪಾಲಿಕೆಗೆ ಪತ್ರ ಬರೆದಿದ್ದಾರೆ.