ಬಂಟ್ವಾಳ, ಆ 26 (DaijiworldNews/MS): ಪುತ್ತೂರಿನಲ್ಲಿ ಯುವತಿಯ ಕತ್ತು ಸೀಳಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುದ್ದುಪದವಿನಲ್ಲಿರುವ ಮೃತ ಯುವತ ಗೌರಿ ಮನೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ ಶುಕ್ರವಾರ ಭೇಟಿ ನೀಡಿದ್ದಾರೆ.
ಭಗವಂತ ಖೂಬಾಗೆ ಬಿಜೆಪಿ ರಾಜ್ಯಾಧ್ಯಕ್ಷ, ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದ್ದು, ಮೃತ ಗೌರಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಮಾಜಿಶಾಸಕರಾದ ಪದ್ಮನಾಭ ಕೊಟ್ಟಾರಿ, ಸಂಜೀವ ಮಠಂದೂರು,ಬಿಜೆಪಿ ಪ್ರಮುಖರಾದ ಹರಿಪ್ರಸಾದ್ ಯಾದವ್, ಸಾಜ ರಾಧಾಕೃಷ್ಣ ಆಳ್ವ, ರಾಜೇಶ್ ಬಾಳೆಕಲ್ಲು ಸಹಿತ ಹಲವರು ಉಪಸ್ಥಿತರಿದ್ದರು.