ಸುಳ್ಯ, ಆ 29 (DaijiworldNews/SM): ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ನಿನ್ನೆ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಒಂದುವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ.
ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಕಾಡು ಪ್ರಾಣಿಗಳ ಸಂರಕ್ಷಣೆ ಕಾಯ್ದೆಯ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಯಾರು ಉರುಳು ಇಟ್ಟಿದ್ದರು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.