ಸುಳ್ಯ, ಆ 30 (DaijiworldNews/MS): ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಒಂದೂವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟಿದೆ.
ಈ ಪ್ರಕರಣ ಸಂಬಂಧ ಸ್ಥಳೀಯ ನಿವಾಸಿಗಳಾದ ಜಯರಾಮ ಮತ್ತು ಪ್ರಥ್ವಿ ಎಂಬ ಇಬ್ಬರನ್ನು ಬಂಧಿಸಲಾಗಿದೆ.
ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.