ಮಂಗಳೂರು, ಆ 31 (DaijiworldNews/HR): ಪಾರ್ಟ್ಟೈಮ್ ಕೆಲಸದ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ಆನ್ಲೈನ್ ಮೂಲಕ 10.88 ಲಕ್ಷ ರೂ. ವಂಚಿಸಿರುವ ಘಟನೆ ವರದಿಯಾಗಿದೆ.
ಅಕ್ಯುಯೆಟ್ ಮೀಡಿಯಾ ಕಂಪೆನಿಯ ಪ್ರತಿನಿಧಿ ಎಂದು ಹೇಳಿ ಪಾರ್ಟ್ ಟೈಂ ಜಾಬ್ ಬಗ್ಗೆ ಸಂದೇಶ ಕಳುಹಿಸಿ, ಬಳಿಕ ಆನ್ ಲೈನ್ ಮೂಲಕ ಪ್ರತಿದಿನ 2-3 ಸಾವಿರ ಸಂಪಾದನೆ ಮಾಡಬಹುದು ಎಂದು ನಂಬಿಸಿ ಅವರ ಬ್ಯಾಂಕ್ ಖಾತೆಗಳಿಂದ ಸುಮಾರು 10.88 ಲಕ್ಷ ರೂ. ವಂಚಿಸಿದ್ದಾರೆ.
ಇನ್ನು ಆ.26ರಿಂದ ಆ.28 ತನಕ ಸುಮಾರು 10.88 ಲಕ್ಷ ರೂ. ಹಣವನ್ನು ವರ್ಗಾಯಿಸಿ ವಂಚಿಸಿರುವುದಾಗಿ ಸೆನ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.