ಸುಳ್ಯ, ಎ10(SS): ಮನೆಯ ಹಿಂಬದಿಯಲ್ಲೇ ಅಕ್ರಮವಾಗಿ ಗೋ ಹತ್ಯೆ ನಡೆಸಿ ಮಾಂಸವನ್ನು ಮಾರಾಟ ಮಾಡುತ್ತಿದ್ದ ಗೋದಾಮಿಗೆ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ.
ಸುಳ್ಯ ತಾಲ್ಲೂಕು ಅರಂತೋಡು ಗ್ರಾಮದ ಸಂಶುದ್ದೀನ್ ಎಂಬವರ ಮನೆಯ ಹಿಂಬದಿಯಲ್ಲಿ ಗೋದಾಮು ನಿರ್ಮಿಸಿ ಅಕ್ರಮವಾಗಿ ಗೋವನ್ನು ವಧೆ ಮಾಡಿ ಮಾಂಸವನ್ನು ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಸರ್ಫುದ್ದೀನ್ ಎಂಬವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮುನೀರ್ ಮತ್ತು ಮುಬಾರಕ್ ಎಂಬವರು ಸ್ಥಳದಿಂದ ಪರಾರಿಯಾಗಿದ್ದಾರೆ.
ಆರೋಪಿಗಳಿಂದ ಸುಮಾರು 2 ಸಾವಿರ ರೂ. ಮೌಲ್ಯದ ದನದ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.