ಮಂಗಳೂರು, ಸೆ 02 (DaijiworldNews/MS): ಮಂಗಳೂರು ಮಹಾನಗರ ಪಾಲಿಕೆ ಒಡೆತನಕ್ಕೊಳಪಟ್ಟ ನವೀಕೃತ ಅಳಕೆ ಮಾರುಕಟ್ಟೆಯಲ್ಲಿ ಬಾಡಿಗೆಗೆ ಇರುವ ವ್ಯಾಪಾರಸ್ಥರು ನಡೆಸುತ್ತಿದ್ದ ಅಂಗಡಿಗಳಿಗೆ ಇದುವರೆಗೆ ಬಾಡಿಗೆ ಪಾವತಿಸದೇ ಇರುವ ಹಿನ್ನೆಲೆಯಲ್ಲಿ ಪಾಲಿಕೆ ಕಂದಾಯ ಅಧಿಕಾರಿಗಳು ಮಳಿಗೆಗಳನ್ನು ಸೆ. 1ರಂದು ಜಫ್ತಿ ಮಾಡಿ, ಪಾಲಿಕೆ ಸುಪರ್ದಿಗೆ ಪಡೆಕೊಂಡಿದ್ದಾರೆ.
ಕಳೆದ ಹಲವಾರು ತಿಂಗಳಿಂದ ಪದೇ ಪದೇ ನೋಟೀಸು ನೀಡಲಾಗಿದ್ದರೂ, 10 ಅಂಗಡಿ ಮಳಿಗೆದಾರರು ಬಾಡಿಗೆಯನ್ನು ಪಾವತಿಸದೇ, ಸುಮಾರು 28 ಲಕ್ಷ ಮೊತ್ತವನ್ನು ಬಾಕಿ ಇಟ್ಟಿದ್ದರು
ಈ ಹಿನ್ನೆಲೆಯಲ್ಲಿ ಮಳಿಗೆಗಳನ್ನು ಸುಪರ್ದಿಗೆ ಪಡೆಯುವುದು ಅನಿವಾರ್ಯವಾದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ರೀತಿಯ ಕಟ್ಟುನಿಟ್ಟಾದ ಕ್ರಮ ಕೈಗೊಂಡ ಪರಿಣಾಮವಾಗಿ ಬಾಡಿಗೆ ಪಾವತಿಸಲು ಮುಂದೆ ಬಂದಿದ್ದಾರೆ.