ಉಡುಪಿ, ಸೆ 02 (DaijiworldNews/AK):ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಸರ್ಕಾರ ಮುಂದಾದರೆ, ಸಮಯ, ಹಣ ಉಳಿತಾಯವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದೇ ಪದೇ ಬರುವ ಚುನಾವಣೆಯಿಂದ ಅಭಿವೃದ್ಧಿ ಕೆಲಸ ಕುಂಠಿತ ಆಗುತ್ತದೆ. ಭಾರತದಲ್ಲಿ ವರ್ಷದ ಮೂರ್ನಾಲ್ಕು ತಿಂಗಳು ಚುನಾವಣೆ ನಡೆಯುತ್ತಿದೆ. ಇದರಿಂದ ಅಭಿವೃದ್ಧಿ ಕೆಲಸಗಳು ಕುಂಠಿತವಾಗುತ್ತದೆ. ಟೆಂಡರ್ ಕರೆಯಲು ಆಗಲ್ಲ ಎಂದು ಹೇಳಿದರು.
ಕೇರಳದಲ್ಲಿ ಜಿಲ್ಲಾ ಪಂಚಾಯತ್ ಗ್ರಾಮ ಪಂಚಾಯತ್ ನಗರಸಭೆ ಚುನಾವಣೆಗಳು ಒಟ್ಟಿಗೆ ನಡೆಯುತ್ತವೆ. ಇದೇ ರೀತಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಒಟ್ಟಿಗೆ ನಡೆಯಬಹುದು. ದೇಶದಲ್ಲಿ ಸಮಯ, ಶ್ರಮ, ಹಣ ಉಳಿಸಬಹುದು ಎಂದರು.