ಮಂಗಳೂರು, ಸೆ 05 (DaijiworldNews/MS): ನಗರದಲ್ಲಿ ವ್ಯಾಪಕವಾಗಿ ಜಾಲಹರಡಿದ್ದ ಮಾದಕ ವಸ್ತುಗಳ ಮಾರಾಟ,ಸೇವನೆ, ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ಸಮಪರ್ಕವಾಗಿ ನಿಗ್ರಹಿಸಿ ನಗರವನ್ನು ಕಾನೂನು ಅಸ್ತ್ರ ಸ್ವಚ್ಚಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರ ವರ್ಗಾವಣೆಯಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕ್ಕೆ ಹೊಡೆತ ನೀಡಲಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಕಿಡಿ ಕಾರಿದ್ದಾರೆ.
ನಮ್ಮ ಜಿಲ್ಲೆಯ ಮಕ್ಕಳು ದುಶ್ಚಟಗಳಿಗೆ ಬಲಿಯಾಗಬಾರದು ಎನ್ನುವ ಸಂಕಲ್ಪದೊಂದಿಗೆ ಹೋರಾಡುತ್ತಿದ್ದ ಕಮೀಷನರ್ ಅವರ ವರ್ಗಾವಣೆ ಮಾಡಿ ಕಾಂಗ್ರೆಸ್ ಏನು ಸಾಧಿಸಿತು.ಅಕ್ರಮ ಚಟುವಟಿಕೆಗೆ ಪರೋಕ್ಷವಾಗಿ ಆಡಳಿತ ಪಕ್ಷ ಕುಮ್ಮಕ್ಕು ನೀಡುವಂತೆ ಕಾಣುತ್ತಿದೆ.ಮುಂದಿನ ದಿನಗಳಲ್ಲಿ ಮತ್ತೆ ಮಾದಕ ವಸ್ತುಗಳ ಜಾಲ ತಲೆ ಎತ್ತಿ ಮಕ್ಕಳ ಭವಿಷ್ಯ ಹಾಳಾದರೆ ಕಾಂಗ್ರೆಸ್ ಹೊಣೆ ಹೊರಬೇಕು ಎಂದು ಎಚ್ಚರಿಸಿರುವ ಶಾಸಕರು,ಹೊಸ ಕಮೀಷನರ್ ಅವರಿಗಾದರೂ ಪೂರ್ಣ ಸ್ವಾತಂತ್ರ್ಯ ನೀಡಿ ಈ ಹೋರಾಟ ಮುಂದುವರಿಸಲು ಎಲ್ಲಾ ಅವಕಾಶ ಕಲ್ಪಿಸಬೇಕು.ಇಲ್ಲದಿದ್ದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಈ ಅನ್ಯಾಯದ ವಿರುದ್ದ ಹೋರಾಟ ಮಾಡಲಾಗುದು ಎಂದು ಹೇಳಿದ್ದಾರೆ.