ಮಂಗಳೂರು, ಸೆ 06 (DaijiworldNews/MS): ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಸೆ.6ರಂದು ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಯ್ಕೆಯಾಗಿರುವ 207 ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಪೌರಾಡಳಿತ ಇಲಾಖೆಯ ನಿರ್ದೇಶಕಿ ಮಂಜುಶ್ರೀ, ಪೌರಕಾರ್ಮಿಕ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ನಾಗಣ್ಣ, ಮಂಗಳೂರು ಡಿಯುಡಿಸಿ ಯೋಜನಾ ನಿರ್ದೇಶಕರಾದ ಅಭಿಷೇಕ್ ವಿ.ಎಸ್ ಉಪಸ್ಥಿತರಿದ್ದರು.