ಮಂಗಳೂರು, ಸೆ 06 (DaijiworldNews/SM): ಬಡ ಜನರಿಗಾಗಿ ರೂಪಿಸಿರುವ ವಸತಿ ಯೋಜನೆ ಯಡಿಯಲ್ಲಿ ನೀಡುವ ವಸತಿಗಳನ್ನು ಅರ್ಹ ಫಲಾನುಭವಿಗಳಿಗೆ ಶೀಘ್ರದಲ್ಲಿಯೇ ಒದಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ವಸತಿ, ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ,ಜೆಡ್ ಜಮೀರ್ ಅಹಮ್ಮದ್ ಖಾನ್ ತಿಳಿಸಿದರು.
ಅವರು ಸೆ.6ರ ಬುಧುವಾರ ರಂದು ಜಿಲ್ಲಾ ಪಂಚಾಯತ್ ನ್ ಸಭಾಂಗಣದಲ್ಲಿ ನಡೆದ ವಸತಿ, ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ಸರ್ಕಾರ ಬಡ ಜನರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಉದ್ದೇಶವನ್ನು ಹೊಂದಿ ವಿವಿಧ ವಸತಿ ಯೋಜನೆಗಳನ್ನು ಜಾರಿಗೆ ತಂದಿದೆ ಇವುಗಳನ್ನು ವಿಳಂಬ ಮಾಡದೆ ವಸತಿ ಕಲ್ಪಿಸಬೇಕು. ಯೋಜನೆಗಳಲ್ಲಿ ವಿಳಂಬವಾದರೆ ಉದ್ದೇಶ ಈಡೇರುವುದಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ 1,87,600 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7706 ವಸತಿಗಳನ್ನು ಕಲ್ಪಿಸಬೇಕೆಂಬ ಗುರಿ ಹೊಂದಲಾಗಿದೆ ಇವುಗಳ ಅನುಷ್ಠಾನಕ್ಕೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಜಿಲ್ಲೆಯಲ್ಲಿ ಬಸವ ವಸತಿ ಅಂಬೇಡ್ಕರ್ ನಿವಾಸ ಯೋಜನೆಯಡಿ ನೀಡುತ್ತಿರುವ ಎರಡುವರೆ ಯಿಂದ ಮೂರು ಲಕ್ಷದ ಅನುದಾನದಲ್ಲಿ ಪೂರ್ಣ ಪ್ರಮಾಣದಲ್ಲಿ ಮನೆಯನ್ನು ಕಟ್ಟಲ್ಲು ಕಷ್ಟ ಹೀಗಾಗಿ ನಿಗದಿತ ಗುರಿ ಸಾಧ್ಯವಾಗಲಿಲ್ಲ. ಸಂಪೂರ್ಣವಾಗಿ ಮನೆ ಕಟ್ಟಲು ಎಂಟು ಲಕ್ಷ ಅವಶ್ಯವಿದೆ ಎಂದರು.
ರಾಜ್ಯ ಸರ್ಕಾರದಿಂದ ಮನೆ ಕಟ್ಟಲು ನೀಡುವ ಸಬ್ಸಡಿ ಮೊತ್ತವನ್ನು ಹೆಚ್ಚಿಸಿದರೆ ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯ ಕೇಳಿ ಬರುತ್ತೀದೆ ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಹಾಸ್ಟಲ್ ಗಳಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು. ನೆನ್ನೆ ವೆಲೆನ್ಸಿಯಾ ರಸ್ತೆಯಲ್ಲಿ ಭೇಟಿ ನೀಡಿದ ವಿದ್ಯಾರ್ಥಿ ನಿಲಯದಲ್ಲಿ ಮೂಲಭೂತ ಸೌಕರ್ಯದ ಕೊರತೆ ಎದ್ದು ಕಾಣುತ್ತಿದ್ದು ಊಟ ಉಪಚಾರ ವ್ಯವಸ್ಥೆ ಸರಿಯಾಗಿಲ್ಲ ಎಂಬ ದೂರಗಳು ವಿದ್ಯಾರ್ಥಿಗಳಿಂದ ಕೇಳು ಬರುತ್ತಿದ್ದವು ಈ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸಬೇಕು ಆಗಿಂದಾಗೆ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಸರಿಪಡಿಸಬೇಕು ಎಂದರು.
ಜಿಲ್ಲಾ ವ್ಯಾಪ್ತಿಯಲ್ಲಿ ವಕ್ಫ ಆಸ್ತಿ ಎಷ್ಟಿದೆ, ನ್ಯಾಯಾಲಯದ ಪ್ರಕರಣಗಳ ಬಗ್ಗೆ ಹಾಗೂ ಅವುಗಳಲ್ಲಿ ಅತಿಕ್ರಮಣ ಆಸ್ತಿ ಎಷ್ಟಿದೆ ಎಂಬ ಸ್ವವಿವರವಾದ ಮಾಹಿತಿಯನ್ನು ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಪ್ಯಾಸೆಂಜರ್ ಆಟೋರಿಕ್ಷಾ ವಾಹನವನ್ನು ಖರೀದಿಸಲು ಶೇಕಡ 50ರಷ್ಟು ಸಹಾಯಧನವನ್ನು ನೀಡಿ ಸ್ವಂತ ಉದ್ಯೋಗ ಕೈಗೊಳ್ಳಲು ಸರ್ಕಾರ ಯೋಜನೆ ಜಾರಿಗೆ ತಂದಿದೆ ಇದರಿಂದ ವಾಹನ ಚಾಲಕರು ಸ್ವಂತ ವಾಹನವನ್ನು ಖರೀದಿಸಲು ಅನುಕೂಲವಾಗಲಿದೆ ಎಂದರು.
ಇದೇ ಸಂಧರ್ಭದಲ್ಲಿ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಮಂಜೂರಾದ ಫಲಾನುಭವಿಗಳಿಗೆ ಆದೇಶಪತ್ರ ವಿತರಿಸಿದ್ದರು. ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಜಾರಿಗೆ ತಂದಿದೆ ಇವುಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಜನಸಾಮಾನ್ಯರು ಫಲಾನುಭವಿಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.