ಮಂಗಳೂರು, ಸೆ 08 (DaijiworldNews/MS): ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ಸೆ.8ರ ಶುಕ್ರವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, ದ.ಕ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ವಿವರ :
ರಾಜ್ಯಪಾಲರು 12 ಗಂಟೆಗೆ ನಗರದ ಟಿ.ಎಂ.ಎ. ಪೈ ಕನ್ವೆನ್ಶನ್ ಸಭಾಂಗಣದಲ್ಲಿ ದಿ ಫಿಸಿಯೋಥೆರಪಿ ಕಾನ್ಫರೆನ್ಸ್ ಮ್ಯಾಂಗಳೂರ್ ಫಿಸಿಯೋಕಾನ್ 2023 ಕಾರ್ಯಕ್ರಮ ಉದ್ಘಾಟಿಸುವರು. ಮಧ್ಯಾಹ್ನ 1 ಗಂಟೆಗೆ ನಗರದ ಹೋಟೆಲ್ ತಾಜ್ ವಿವಂತಾದಲ್ಲಿ ವಾಸ್ತವ್ಯ ಮಾಡುವರು. 1.30ಕ್ಕೆ ಖಾಸಗಿ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಆಡಳಿತದ ಅಧಿಕಾರಿಗಳೊಂದಿಗೆ ಸಂವಾದ ನಡೆಸುವರು. ಸಂಜೆ 5.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು