ಮಂಗಳೂರು, ಸೆ. 08 (DaijiworldNews/SM): 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯಕ್ಕೆ ಒಳಪಡುವ ವಿದ್ಯಾವಂತ ನೀರುದ್ಯೋಗಿ ಯುವಕ/ಯುವತಿಯರಿಗೆ ಬೆಂಗಳೂರಿನಲ್ಲಿ ವಿವಿಧ ಕ್ಷೇತ್ರಗಳ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಅವಧಿಯಲ್ಲಿ ಸ್ಟೈಫಂಡ್, ಊಟ, ವಸತಿ ಸೌಲಭ್ಯದೊಂದಿಗೆ ವಿವಿಧ ಕ್ಷೇತ್ರಗಳ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಇದೇ ಸೆ.16 ರೊಳಗೆ ಆನ್ಲೈನ್ ಮೂಲಕ ಕೌಶಲ್ಯ ತರಬೇತಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.