ಬಂಟ್ವಾಳ, ಸೆ. 09 (DaijiworldNews/SM): ಕರ್ನಾಟಕ ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಇಂದು ಕೇಂದ್ರದ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿದರು ಹಾಗೂ ಆಶೀರ್ವಾದ ಪಡೆದರು. ಮತ್ತು ಅವರ ಆರೋಗ್ಯವನ್ನು ವಿಚಾರಿಸಿದರು.
ಪೂಜಾರಿಯವರೊಂದಿಗೆ ರಾಜಕೀಯದ ಬಗ್ಗೆ ಮಾತನಾಡಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯುವೆ ಎಂದು ಭರವಸೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ದನ ಪೂಜಾರಿ ಅವರು ನಮಗೆಲ್ಲರಿಗೂ ಮಾರ್ಗದರ್ಶಿ. "ಅವರು ಬಡವರ ಬಗ್ಗೆ ಕಾಳಜಿ ಹೊಂದಿದ್ದಾರೆ.
ಅವರು ಹಲವಾರು ಯೋಜನೆಗಳನ್ನು ಒದಗಿಸಿದ್ದಾರೆ. ಪ್ರಾಮಾಣಿಕವಾಗಿ ಹಾಗೂ ಕಠಿಣ ಪರಿಶ್ರಮದಿಂದ ಪಕ್ಷವನ್ನು ಒಗ್ಗೂಡಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು.