ಮಂಗಳೂರು, ಸೆ 10 (DaijiworldNews/HR): ನಗರದ ಬಿಜೈನಲ್ಲಿರುವ ಅಪಾರ್ಟ್ಮೆಂಟ್ವೊಂದರಲ್ಲಿ ತಾಯಿಯೊಂದಿಗೆ ವಾಸವಾಗಿದ್ದ 17 ವರ್ಷದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಅಪಾರ್ಟ್ಮೆಂಟ್ನಲ್ಲಿ ಸ್ವಚ್ಛತಾ ಕೆಲಸ ಮಾಡಿಕೊಂಡಿದ್ದ ತಾಯಿ ಶಿವನಮ್ಮ ಅವರೊಂದಿಗೆ ನೆಲೆಸಿದ್ದು, ಮೃತ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.
ಇನ್ನು ವಿದ್ಯಾರ್ಥಿನಿ ಬರೆದಿಟ್ಟಿದ್ದ ಡೆತ್ನೋಟ್ ಪತ್ತೆಯಾಗಿದ್ದು, ತಾಯಿ ನೀಡಿದ ದೂರಿನಂತೆ ಕದ್ರಿ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821