ಕೋಟ, ಏ 11(SM): ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಹಿಂದೆ ಮೀನುಗಾರಿಕೆ ಸಚಿವರಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಆದ್ದರಿಂದ ಈ ಬಾರಿ ಅವರನ್ನು ಸಂಸದರನ್ನಾಗಿ ಮಾಡುವ ಮೂಲಕ ಕ್ಷೇತ್ರದ ಅಭಿವೃದ್ಧಿ, ಮೀನುಗಾರರ ಅಭಿವೃದ್ಧಿಗೆ ಸಹಕರಿಸಿ ಎಂದು ಸಚಿವ ನಾಡಗೌಡರ್ ವಿನಂತಿಸಿದರು.
ಅವರು ಬುಧವಾರ ಕೋಟ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಪ್ರತಿ ಚುನಾವಣೆಗಳನ್ನು ಅಭಿವೃದ್ಧಿಯ ಅಜೆಂಡದ ಮೂಲಕ ಎದುರಿಸಿದ್ದವು. ಆದರೆ ಇಂದು ಬಿಜೆಪಿ ಸರಕಾರದಲ್ಲಿ ಹೇಳಿಕೊಳ್ಳಲು ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ಹೀಗಾಗಿ ಸೈನಿಕರು, ದೇಶ ಮುಂತಾದ ಭಾವನಾತ್ಮಕ ವಿಚಾರಗಳನ್ನು ಅಜೆಂಡವಾಗಿಸಿ ಚುನಾವಣೆ ಎದುರಿಸುತ್ತಿದ್ದಾರೆ ಎಂದರು.