ಕಾಸರಗೋಡು, ಸೆ 12 (DaijiworldNews/SM): ಅಭ್ಯರ್ಥಿಯಿಂದ ನಾಮಪತ್ರ ಹಿಂಪಡೆಯಲು ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ ಸೇರಿದಂತೆ ಎಲ್ಲಾ ಅಭ್ಯರ್ಥಿಗಳು ಸೆ. 21ರಂದು ನೇರವಾಗಿ ಕೋರ್ಟ್'ಗೆ ಹಾಜರಾಗುವಂತೆ ಕಟ್ಟುನಿಟ್ಟಿನ ಆದೇಶ ನೀಡಿದೆ.
ನೋಟಿಸ್ ನೀಡಿದ್ದರೂ ಇದುವರೆಗೆ ಅಭ್ಯರ್ಥಿಗಳು ಹಾಜರಾಗಿಲ್ಲ ಎಂದು ಸ್ಪಷ್ಟಪಡಿಸಿರು ಕಾಸರಗೋಡು ನ್ಯಾಯಾಲಯ ಹಾಜರಾಗುವಂತೆ ಆದೇಶ ನೀಡಿದೆ. ಮೇ 20ರಂದು ಸೆ. 5ರಂದು ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಹಾಜರಾಗಲಿಲ್ಲ. ಹಾಜರಾಗದೆ ಇದ್ದುದರಿಂದ ಮಂಗಳವಾರ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಹಾಜರಾಗದೆ ಇದ್ದುದರಿಂದ ನ್ಯಾಯಾಲಯ ಅತೃಪ್ತಿ ವ್ಯಕ್ತಪಡಿಸಿ ಈ ಆದೇಶ ನೀಡಿದೆ.
2021ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ ದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ. ಸುರೇಂದ್ರನ್ ಬಿ ಎಸ್ಪಿ ಅಭ್ಯರ್ಥಿಯಾಗಿದ್ದ ಕೆ. ಸುಂದರರಿಂದ ನಾಮಪತ್ರ ಹಿಂಪಡೆಯುವಂತೆ ಬೆದರಿಸಿ ಬಳಿಕ ಹಣ ಹಾಗೂ ಮೊಬೈಲ್'ನ್ನು ನೀಡಿರುವುದಾಗಿ ಬಯಲಿಗೆ ಬಂದಿತ್ತು. ನ್ಯಾಯಾಲಯದ ಆದೇಶದಂತೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಪ್ರಕರಣದಲ್ಲಿ ಯುವ ಮೋರ್ಚಾ ರಾಜ್ಯ ಮಾಜಿ ಕೋಶಾಧಿಕಾರಿ ಸುನಿಲ್ ನಾಯ್ಕ್, ಬಿಜೆಪಿ ಮುಖಂಡರಾದ ಕೆ. ಬಾಲಕೃಷ್ಣ ಶೆಟ್ಟಿ, ಮಣಿಕಂಠ ರೈ, ಲೋಕೇಶ್ ನೋಂಡ ಮೊದಲಾದವರು ಆರೋಪಿಗಳಾಗಿದ್ದಾರೆ.