ಮಂಗಳೂರು, ಸೆ.14 (DaijiworldNews/SM): ಪೊಲೀಸ್ ಸಿಬ್ಬಂದಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಪಿತಾನಿಯೋ ಬಳಿ ಸೆಪ್ಟೆಂಬರ್ 14ರ ಗುರುವಾರದಂದು ವರದಿಯಾಗಿದೆ.
ಮೂಲತಃ ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ನಿವಾಸಿ ಮಹೇಶ್ ಸವದತ್ತಿ(31) ಆತ್ಮಹತ್ಯೆ ಮಾಡಿಕೊಂಡವರು. ಇವರು 2018ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. 2019ರಲ್ಲಿ ಮಂಗಳೂರು ಸಂಚಾರಿ ದಕ್ಷಿಣ ಠಾಣೆಯಲ್ಲಿ ಕರ್ತವ್ಯ ಆರಂಭಿಸಿದ್ದರು. ಇದೀಗ ಅವರು ನಿಗೂಢವಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದುಬಂದಿಲ್ಲ.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.