ಕಾಸರಗೋಡು, ಸೆ 15 (DaijiworldNews/HR): ಕರ್ನಾಟಕದಿಂದ ಕಾಸರಗೋಡಿಗೆ ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 240 ಕಿಲೋ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.
ಉಳಿಯತ್ತಡ್ಕದ ಕೆ.ಅನ್ವರ್ ಅಲಿ ಮತ್ತು ಚೆರ್ಕಳ ದ ಬಿ. ಮೊಯ್ದು ಬಂಧಿತರು.
ಹೊಸಂಗಡಿ ಅಬಕಾರಿ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ. ವಶಪಡಿಸಿಕೊಂಡ ತಂಬಾಕು ಉತ್ಪನ್ನಗಳ ಮೌಲ್ಯ ಎರಡು ಲಕ್ಷ ರೂ. ಮೌಲ್ಯ ಎಂದು ಅಂದಾಜಿಸಲಾಗಿದೆ.