ಉಡುಪಿ, ಸೆ 15 (DaijiworldNews/MS): ಬಹುಕೋಟಿ ವಂಚನೆ ಹಗರಣದಲ್ಲಿ ಬಂಧನವಾಗಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನದ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜಕೀಯ ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಬೇಕುಪ್ರಕರಣದ ಕುರಿತು ತನಿಖೆ ಆಗುತ್ತಿದೆ ನಿಷ್ಪಕ್ಷವಾಗಿ ತನಿಖೆಯಾಗಬೇಕು. ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ ತಪ್ಪು ಮಾಡದೆ ಇದ್ದರೆ ಅನಾವಶ್ಯಕವಾಗಿ ತೊಂದರೆ ಕೊಡುವುದು ಬೇಡ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿಯಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು, ಚೈತ್ರ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ.ಚೈತ್ರ ಕುಂದಾಪುರದ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು. ಇನ್ನು ಈಪ್ರಕರಣದ ಬಗ್ಗೆ ಮಾಹಿತಿಗಳನ್ನು ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆಉನ್ನತ ಮಟ್ಟದ ತನಿಖೆಗೆ ನಾನು ಆಗ್ರಹಿಸುತ್ತೇನೆ..ನಾವು ಯಾರೂ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ.ನಾವು ಯಾರು ಅವಳನ್ನು ರಕ್ಷಣೆ ಮಾಡುತ್ತಿಲ್ಲ
ಯಾರು ತಪ್ಪು ಮೋಸ ಮಾಡಿದ್ರು ಕೂಡ ಶಿಕ್ಷೆ ಆಗಲೇಬೇಕು.ಚೈತ್ರ ಕುಂದಾಪುರ ಜೊತೆಗೆ ನನಗೆ ಯಾವುದೇ ರೀತಿಯ ನೇರ ಸಂಪರ್ಕ ಇರಲಿಲ್ಲ.ಕಾನೂನು ಮೂಲಕ ಕ್ರಮ ಕೈಗೊಂಡು ತನಿಖೆ ಆಗಬೇಕು.ಉಪ್ಪು ತಿಂದವರು ನೀರು ಕುಡಿಯುತ್ತಾರೆ ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನನ್ನ ಜೊತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಹಾಗೆ ಚೈತ್ರಾಳು ಫೋಟೋ ತೆಗೆದುಕೊಂಡಿರಬಹುದು. ನನಗೆ ಚೈತ್ರ ಫೋನ್ ಮಾಡಿಲ್ಲ. ನಾನು ಕೂಡ ಅವಳನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ .
ಈ ಬಾರಿ ಉಡುಪಿ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಟಿಕೆಟ್ ತನಗೆ ಚೈತ್ರ ಕುಂದಾಪುರ ಪುಕಾರು ಹಬ್ಬಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವೆ, ಯಾರಿಗೆ ಟಿಕೆಟ್ ಕೊಡಬೇಕು ಎಲ್ಲಿ ಟಿಕೆಟ್ ಕೊಡಬೇಕು ಅನ್ನೋದು ವರಿಷ್ಠರು ತೀರ್ಮಾನ ಮಾಡುತ್ತಾರೆ.
ಭಾರತೀಯ ಜನತಾ ಪಾರ್ಟಿಗೆ ಗಟ್ಟಿಮುಟ್ಟಾದ ನೇತೃತ್ವ ಇದೆ.ನರೇಂದ್ರ ಮೋದಿ ಅಮಿತ್ ಶಾ ನಡ್ದ ಲೋಕಸಭೆಗೆ ಯಾರಿಗೆ ಟಿಕೆಟ್ ನೀಡಬೇಕು ಅಂತ ತೀರ್ಮಾನ ಮಾಡುತ್ತಾರೆ. ಸ್ಪರ್ಧೆ ಮಾಡುತ್ತೇನೆ ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡರು ಅದಕ್ಕೆ ಬೆಲೆ ಇರುವುದಿಲ್ಲ. ರಾಷ್ಟ್ರೀಯ ನಾಯಕರು ಎಲ್ಲಿ ಸ್ಪರ್ಧೆ ಮಾಡಬೇಕು ಎಂದು ತೀರ್ಮಾನ ಮಾಡುತ್ತಾರೆ. ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡರೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಒತ್ತಾಯಿಸಿದ್ದಾರೆ.
ಯಾರು ಯಾರು ದೆಹಲಿ ನಾಯಕರ, ರಾಜ್ಯನಾಯಕರ ಹೆಸರು ದುರುಪಯೋಗ ಮಾಡಿಕೊಂಡಿದ್ದಾರೆಈ ಲಿಂಕ್ ತನಿಖೆ ಆಗಬೇಕು, ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ.ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿಯು ಇಲ್ಲ, ಮುಂದೆ ಬರುವುದೂ ಇಲ್ಲ.ಅಂತಹ ಪಾರ್ಟಿ ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ