ಮಂಗಳೂರು, ಸೆ. 15 (DaijiworldNews/SM): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಇವರ ಸಹಯೋಗದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ 2023ನ್ನು ಸೆ.16ರ ಶನಿವಾರ ಮಧ್ಯಾಹ್ನ 2.30ಕ್ಕೆ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯಿತ್ ನ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಡಾ. ಆನಂದ್ ಕೆ. ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ ರಿಶ್ಯಾಂತ್, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅನುಜ್ಞಾನಾಧಿಕಾರಿ ಡಾ. ಸುದರ್ಶನ್ ಸಿಎಂ, ಜಿಲ್ಲಾ ತರಬೇತಿ ಕೇಂದ್ರ ಸುರತ್ಕಲ್ ನ ಪ್ರಾಂಶುಪಾಲರಾದ ಡಾ. ಕಿಶೋರ್ ಕುಮಾರ್ ಎಂ, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕರಾದ ಡಾ. ಸದಾಶಿವ ಶಾನುಭೋಗ್, ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ದುರ್ಗಾ ಪ್ರಸಾದ್ ಎಂ. ಆರ್, ಪದವಿ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಪೆÇ್ರ. ರಾಮೇಗೌಡ, ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್. ಅಧಿಕಾರಿ ಡಾ. ನಾಗರತ್ನ ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಯಾಗಿ ಮನೋರೋಗ ತಜ್ಞರಾದ ಡಾ.ಸುಪ್ರೀತ ಭಾಗವಹಿಸುವರು.