ಉಡುಪಿ,ಸೆ 17 (DaijiworldNews/HR): ಅರಬಿಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಮಲ್ಪೆ ಬೀಚ್ ಪ್ರವೇಶದ ಮೇಲೆ ಪ್ರವಾಸಿ ಗರಿಗೆ ಹಾಗೂ ಸಾರ್ವಜನಿಕರಿಗೆ ಸೆ.25ರವರೆಗೆ ವಿಧಿಸಲಾಗಿದೆ.
ಮೇ 16ರಿಂದ ಸೆ.15ರವರೆಗೆ ಈ ಹಿಂದೆ ಪ್ರವೇಶ ನಿಷೇಧಿಸಲಾಗಿತ್ತು ಇದೀಗ ಜಿಲ್ಲಾಧಿಕಾರಿಯವರ ಸೂಚನೆಯಂತೆ ಸೆ.25ರವರೆಗೆ ಮುಂದುವರಿಸಲಾಗಿದೆ ಎಂದು ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ಪ್ರತಿ ವರ್ಷ ಹಾರ್ಬರ್ ಕ್ರಾಷ್ಟ್ ನಿಯಮದಂತೆ ಮಲ್ಪೆ ಬೀಚ್ ಪ್ರದೇಶದಲ್ಲಿ ಮಳೆಗಾಲದುದ್ದಕ್ಕೂ ಎಲ್ಲಾ ರೀತಿಯ ಜಲ ಸಾಹಸ ಚಟುವಟಿಕೆಗಳಿಗೆ ನಿರ್ಬಂಧವಿದ್ದು, ಇತ್ತೀಚಿನ ಮಳೆಯಿಂದಾಗಿ ಅರಬಿಸಮುದ್ರ ಈಗಲೂ ಪ್ರಕ್ಷುಬ್ಧಗೊಂಡಿರುವ ಕಾರಣ ಪ್ರವಾಸಿಗರು ಹಾಗೂ ಸಾರ್ವಜನಿಕರು ಸೆ.25ರ ತನಕ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.