ಬಜಪೆ, ಸೆ 18 (DaijiworldNews/HR): ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರಣ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ.
ಯುವತಿ ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಮೃತಪಟ್ಟು, ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್ (9) ಹಾಗೂ ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ.
ಇನ್ನು ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.