ಮಂಗಳೂರು, ಸೆ 21 (DaijiworldNews/HR): ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಇಂದಿರಾ ಕ್ಯಾಂಟಿನ್ಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಹೊಸದಾಗಿ 11 ಇಂದಿರಾ ಕ್ಯಾಂಟಿನ್ ನಿರ್ಮಾಣ ವಿಚಾರ ಕುರಿತು ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಬಜಪೆ, ಮಂಗಳೂರು ಮನಪ, ಬೆಳ್ತಂಗಡಿ, ಕಿನ್ನಿಗೋಳಿ, ಮೂಡಬಿದಿರೆ, ಕಡಬ, ಮುಲ್ಕಿ, ಕೋಟೆಕಾರ್, ವಿಟ್ಲ, ಉಲ್ಲಾಳ, ಸೋಮೇಶ್ವರದಲ್ಲಿ ನೂತನ ಕ್ಯಾಂಟಿನ್ ನಿರ್ಮಾಣಕ್ಕೆ ಯೋಜನೆ ಹಾಕಲಾಗಿದ್ದು, ಈ ಕ್ಯಾಂಟಿನ್ಗಳಿಗೆ ಈಗಾಗಲೇ ಸ್ಥಳ ನಿಗದಿಯೂ ಆಗಿದೆ ಎಂದರು.
ಇನ್ನು ಜಿಲ್ಲೆಯ ಕ್ಯಾಂಟಿನ್ ಗಳಲ್ಲಿ ಸ್ಥಳೀಯ ಆಹಾರ ಪದ್ದತಿ ಬಳಕೆಗೆ ಮನವಿ ಮಾಡಲಾಗಿದೆ.