ಸುಳ್ಯ, ಎ12(SS): ಮೋದಿ ನೇತ್ರತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನೆ ನಾಶವಾಗುತ್ತಿದೆ. ಇಂದು ಪಾಕ್ ಬಿಟ್ಟು ಬೇರೆಲ್ಲ ರಾಷ್ಟ್ರಗಳು ಭಾರತದೊಂದೊಗಿವೆ ಎಂದು ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಯೋತ್ಪಾದನೆಯನ್ನು ನಾಶ ಮಾಡುತ್ತಿದ್ದು, ಇಂದು ಪಾಕ್ ಬಿಟ್ಟು ಬೇರೆಲ್ಲ ರಾಷ್ಟ್ರಗಳು ಭಾರತದೊಂದೊಗಿವೆ. ದೇಶದ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿರುವ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಬಿಜೆಪಿ ಪಕ್ಷವನ್ನು ಮತದಾರರು ಆಶೀರ್ವದಿಸಬೇಕು ಎಂದು ಹೇಳಿದ್ದಾರೆ.
ಮೋದಿಯವರು ಪ್ರಧಾನಿಯಾದ ಬಳಿಕ ಭಾರತೀಯ ಸೈನ್ಯಕ್ಕೆ ಶಕ್ತಿ ನೀಡಿದ್ದಾರೆ. ನರೇಂದ್ರ ಮೋದಿಯವರ ಆಡಳಿತದ ಅವಧಿಯಲ್ಲಿ ದೇಶದಲ್ಲಿ ವಿಶೇಷ ಅಭಿವೃದ್ಧಿ ಮತ್ತು ಬದಲಾವಣೆಗಳು ಆಗಿವೆ. ನಮ್ಮ ಜಿಲ್ಲೆಗೂ ಇದೇ ಮೊದಲ ಬಾರಿಗೆ ದೊಡ್ಡ ಮೊತ್ತದಲ್ಲಿ ಅಭಿವೃದ್ಧಿ ಕೆಲಸಕ್ಕೆ ಅನುದಾನಗಳು ಬಂದಿದ್ದು, ದಾಖಲೆಯಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ದೇವರ ದರ್ಶನ ಪಡೆದರು.