ಮಂಗಳೂರು, ಸೆ 22 (DaijiworldNews/MR): ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಜಂಕ್ಷನ್ನಲ್ಲಿ ರಸ್ತೆಗಳು ಹೊಂಡ ಗುಂಡಿಗಳಿಂದ ಸಂಚರಿಸಲು ಸವಾರರು ದಿನನಿತ್ಯ ಪರದಾಡುವಂತಾಗಿದ್ದು, ಇದೀಗ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೇ ಹೊಂಡ ಗುಂಡಿಗಳಿಗೆ ಕಾಂಕ್ರಿಟ್ ಹಾಕಿ ಮುಚ್ಚಿದ್ದಾರೆ.
ಹೊಂಡ ಗುಂಡಿಗಳಿಂದಾಗಿ ಜಂಕ್ಷನ್ ನಲ್ಲಿ ಅಪಘಾತಗಳು ಹೆಚ್ಚುತ್ತಿದ್ದು, ಅಲ್ಲದೇ ಟ್ರಾಫಿಕ್ ಸಮಸ್ಯೆಗಳಿಗೆ ಕೂಡಾ ಈ ಹೊಂಡ ಗುಂಡಿಗಳು ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೇ ಹೊಂಡ ಗುಂಡಿಗಳಿಗೆ ಕಾಂಕ್ರಿಟ್ ಹಾಕಿ ಮುಚ್ಚಿದ್ದು, ಪೊಲೀಸ್ ಸಿಬ್ಬಂದಿಯ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.
ಇನ್ನು ಹೊಂಡ ಗುಂಡಿಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.