ಮಂಗಳೂರು, ಸೆ 25(DaijiworldNews/MS): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಇದೇ ಸೆ.25ರ ಸೋಮವಾರ ಬೆಳಗ್ಗೆ 10 ಗಂಟೆಗೆ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.