ಕುಂದಾಪುರ, ಸೆ 28 (DaijiworldNews/HR): ಮಣಿಪಾಲ ಆರೋಗ್ಯ ಕಾರ್ಡ್ 2023ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ನೊಂದಾವಣಿಗೆ ನವಂಬರ್ 30 ಕೊನೆಯ ದಿನವಾಗಿದೆ ಎಂದು ಕಸ್ತೂರ್ಬಾ ಆಸ್ಪತ್ರೆಯ ಮಣಿಪಾಲದ ವ್ಯವಸ್ಥಾಪಕ ಮೋಹನ ಶೆಟ್ಟಿ ಹೇಳಿದ್ದಾರೆ.
ಕುಂದಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ದೂರದೃಷ್ಟಿಯ ಸಂಸ್ಕಾಪಕ ನಾಯಕ ಡಾ.ಟಿ.ಎಂ.ಎ. ಪೈ ಅವರ 125ನೇ ವರ್ಷದ ಜನ್ಮದಿನಾಚರಣೆಯನ್ನು ಆಚರಿಸುತ್ತಿದೆ. ಅವರ ಉದಾತ್ತ ಕಾರ್ಯವನ್ನು ಸ್ಮರಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಭಾರತೀಯ ಆರೋಗ್ಯ, ವ್ಯವಸ್ಥೆಯನ್ನು ಸಮಾಜಕ್ಕೆ ಸುಲಭವಾಗಿ ದೊರೆಯುವಂತೆ ಮಾಡಿದ ಸ್ಫೂರ್ತಿದಾಯಕ ಅಪರೂಪದ ನಾಯಕ ಡಾ. ಟಿ.ಎಂ.ಎ. ಪೈ. ಮಣಿಪಾಲ್ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಾರಂಭವಾಗಿದೆ. ಮಣಿಪಾಲ್ ಆರೋಗ್ಯ ಕಾರ್ಡ್ ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ, ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. "ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ'' ಎಂಬುದು ಮಣಿಪಾಲ್ ಆರೋಗ್ಯ ಕಾರ್ಡ್ನ ಧ್ಯೆಯವಾಕ್ಯ. ಮಾಹೆ ಮಣಿಪಾಲದ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಮಣಿಪಾಲ ಆರೋಗ್ಯ ಕಾರ್ಡ್ ಅನ್ನು 2000 ರಲ್ಲಿ ಪ್ರಾರಂಭಿಸಲಾಯಿತು. ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯ ವಾಗದಿದ್ದರೂ ಎಲ್ಲರಿಗೂ ರಿಯಾಯಿತಿ ದರದಲ್ಲಿ ಲಭ್ಯವಾಗಬೇಕು ಎಂಬುದು ಇದರ ಉದ್ದೇಶವಾಗಿತ್ತು. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ ಎಂದರು.
ಮಣಿಪಾಲ್ ಆರೋಗ್ಯ ಕಾರ್ಡ್ 2023ರ ಯೋಜನೆಯು `ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ.300, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ರೂ.600 ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ ರೂ. 750. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ. 500 ಕುಟುಂಬಕ್ಕೆ ರೂ.800 ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರೂ. 950 ಆಗಿರುತ್ತದೆ ಎಂದರು.
ಹೊರರೋಗಿ ವಿಭಾಗದಲ್ಲಿ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆಯಲ್ಲಿ ಶೇ.50 ರಿಯಾಯತಿ, ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ.30 ರಿಯಾಯತಿ, ಸಿಟಿ, ಎಂಆರ್ಐ, ಆಲ್ಟ್ರಾ ಸೌಂಡ್ಗಳಲ್ಲಿ ಶೇ.20 ರಿಯಾಯತಿ, ಹೊರರೋಗಿ ವಿಭಾಗದಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ.20 ರಿಯಾಯತಿ, ಒಳರೋಗಿ ವಿಭಾಗದಲ್ಲಿ ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾಗಿದ್ದಲ್ಲಿ ಉಪಯೋಗಿಸುವ ವಸ್ತುಗಳನ್ನು ಹೊರತುಪಡಿಸಿ ಶೇ.25 ರಿಯಾಯತಿ ಪಡೆಯಬಹುದು. ಔಷಧಾಲಯಗಳಲ್ಲಿ ಶೇ.12ವರೆಗೆ ರಿಯಾಯತಿ ಸಿಗಲಿದೆ ಎಂದರು.
ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ. ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ಚಿಕಿತ್ಸಾ ಅಸ್ಪತ್ರೆಗಳಲ್ಲಿ ರಿಯಾಯಿತಿ ಪುಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡ್ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು. ಕಾರ್ಡ್ ನೋಂದಾಯಿಸಿದ ಮೊಬೈಲ್ ಸಂಖ್ಯೆಯಿಂದ 8867579797 ಗೆ ಮಿಸ್ ಕಾಲ್ ಕೊಡುವುದರ ಮೂಲಕ ನೋಂದಣಿ ಮಾಡಿದ ಆರೋಗ್ಯ ಕಾರ್ಡ್ನ ಮಾಹಿತಿ ಪಡೆಯಬಹುದು. ಕಳೆದ 22 ವರ್ಷಗಳಲ್ಲಿ, ಸಾಮಾಜಿಕ ಕಾಳಜಿಯೊಂದಿಗೆ ನಾವು ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ರಿಯಾಯಿತಿ ದರದಲ್ಲಿ ಒದಗಿಸುತ್ತಿದ್ದೇವೆ. ಇತರ ಆಸ್ಪತ್ರೆಗಳ ರಿಯಾಯಿತಿ ಮಾದರಿಗಳನ್ನು ತಿಳಿಯಲು ಮತ್ತು ಹೆಚ್ಚಿನ ವಿವರಗಳನ್ನು www.manipalhealthcard com ಗೆ ಲಾಗ್ ಇನ್ ಆಗುವುದರ ಮೂಲಕ ತಿಳಿದುಕೊಳ್ಳಬಹುದು. ಸಾರ್ವಜನಿಕರು ಮಣಿಪಾಲ್ ಆರೋಗ್ಯ ಕಾರ್ಡ್ ಅನ್ನು ಎಲ್ಲಾ ಅಧಿಕೃತ ಪ್ರತಿನಿಧಿಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9980854700/ 08202923748 ಗೆ ಸಂಪರ್ಕಿಸಬಹುದು ಎಂದರು.
2023ರ ನೋಂದಾವಣಿಗಾಗಿ ಈ ಭಾಗದ ನಮ್ಮ ಅಧಿಕೃತ ಪ್ರತಿನಿಧಿಗಳಾದ ನಾಗರಾಜ-9916888916, ಭದ್ರಯ್ಯ-9448872666, ಸೈಂಟ್ ಮಿಲಾಗ್ರೇಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್-8884459066, ವಂಡ್ಸೆ-ರಕ್ಷಿತ್ ಕುಮಾರ್-9743366746, ಕೋಟ ಸಹಕಾರಿ ವ್ಯವಸಾಯಕ ಸಂಘ (ಸಿ) (ಎಲ್ಲಾ ಶಾಖೆಗಳು) 9448761312 ಇಲ್ಲಿ ನೊಂದಾವಣಿ ಮಾಡಬಹುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಅಕ್ಷಯ್ ಕುಮಾರ್, ಅನಿಲ್, ಪ್ರತಿನಿಧಿ ಭದ್ರಯ್ಯ ಕೋಟೇಶ್ವರ ಉಪಸ್ಥಿತರಿದ್ದರು.