ಉಡುಪಿ, ಸೆ 29 (DaijiworldNews/MS): ಉಡುಪಿ ಜಿಲ್ಲೆಯ ಕಟ್ಟಡ ಸಾಮಾಗ್ರಿ ಸಾಗಾಟದ ಲಾರಿಗಳಿಗೆ ಜಿ ಪಿ ಎಸ್ ಅಳವಡಿಕೆಗೆ ಅಕ್ಟೋಬರ್ 7 ರವೆರೆಗೆ ಕಾಲಾವಕಾಶ ನೀಡಲು ಗುರುವಾರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಉಡುಪಿ ಜಿಲ್ಲೆಯ ಐದು ಮಂದಿ ಶಾಸಕರು ಮತ್ತು ಪ್ರತಿಭಟನಾ ನಿರತ ಲಾರಿ ಮಾಲಕರ ಪ್ರತಿನಿದಿಗಳ ಜೊತೆ ಗುರುವಾರ ಸಂಜೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಿತು.
ಈ ಸಂಧರ್ಭದಲ್ಲಿ ಉಡುಪಿ ಜಿಲ್ಲೆಯ ಲಾರಿ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಕಳೆದ ಎರಡು ದಿನಗಳಿಂದ ಕಟ್ಟಡ ಸಾಮಗ್ರಿ ಸಾಗಾಟ ಬಂದ್ ಮೂಲಕ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾಡಳಿತ ಮತ್ತು ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಲಾರಿ ಮಾಲೀಕರ ಸಮಸ್ಯೆ, ಕಟ್ಟಡ ಸಾಮಾಗ್ರಿ ಬಂದ್ ನಿಂದ ಬಡ ಕೂಲಿ ಕಾರ್ಮಿಕರ ಹಾಗೂ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಭೆಯಲ್ಲಿ ಜಿಲ್ಲಾಧಿಕಾರಿ ಡಾಕ್ಟರ್ ಕೆ. ವಿದ್ಯಾ ಕುಮಾರಿ, ಶಾಸಕರಾದ ಯಶ್ ಪಾಲ್ ಸುವರ್ಣ, ವಿ. ಸುನೀಲ್ ಕುಮಾರ್, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಗಣಿ ಹಾಗೂ ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಲಾರಿ ಮಾಲೀಕರಿಗೆ ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳಿಗೆ ಜಿ ಪಿ ಎಸ್ ಅಳವಡಿಕೆಗೆ ಅಕ್ಟೋಬರ್ 7 ರವೆರೆಗೆ ಕಾಲಾವಕಾಶ ನೀಡಲು ನಿರ್ಧರಿಸಲಾಯಿತು.
ಮಧ್ಯ ಪ್ರಾಚ್ಯದಲ್ಲಿ ಅವರ ಆರ್ಪಿ ಗ್ರೂಪ್ ಭಾರತೀಯ ಕಾರ್ಮಿಕರನ್ನು ಹೊಂದಿರುವ ಅತಿದೊಡ್ಡ ಉದ್ಯೋಗದಾತ ಸಂಸ್ಥೆಯಾಗಿದೆ. ಅವರ ಈ ಯಶಸ್ವಿಗೆ ಭಾರತ ಸರ್ಕಾರದಿಂದ 2008ರಲ್ಲಿ ಪ್ರವಾಸಿ ಭಾರತೀಯ ಸಮ್ಮಾನ್ ಹಾಗೂ 2010ರಲ್ಲಿ ಪದ್ಮಶ್ರೀ ಗೌರವ ಲಭಿಸಿದೆ. ಅವರಿಗೆ ನ್ಯೂಯಾರ್ಕ್ನ ಎಕ್ಸೆಲ್ಸಿಯರ್ ಕಾಲೇಜಿನಿಂದ ಡಾಕ್ಟರೇಟ್ ಪದವಿ ಲಭಿಸಿದೆ.