ಮಂಗಳೂರು, ಸೆ 29 (DaijiworldNews/MS): ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಂಕಿ-ಅಂಶದ ಪ್ರಕಾರ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ನಾಳೆ ಮಧ್ಯಾಹ್ನದವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮೀನುಗಾರರು ಎಚ್ಚರಿಕೆ ವಹಿಸುವಂತೆ ಮುನ್ಸೂಚನೆ ನೀಡಲಾಗಿದೆ.