ಮಂಗಳೂರು, ಸೆ 29 (DaijiworldNews/HR): ತಿರುವನಂತಪುರಂನ ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನ ಮುನ್ಸೂಚನೆಯಂತೆ ಸೆ.29ರಿಂದ ಅಕ್ಟೋಬರ್2ರ ವರೆಗೆ ಅರಬ್ಬಿ ಸಮುದ್ರದಲ್ಲಿ ನಿಮ್ನ ಒತ್ತಡ ಉಂಟಾಗಿದ್ದು, ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಈ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.