ಕುಂದಾಪುರ, ಅ 01 (DaijiworldNews/HR): ಉಡುಪಿ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ಮಟ್ಟ ಹಾಕಿರುವ ಉಡುಪಿ ಜಿಲ್ಲಾ ಎಸ್ಪಿಯವರ ಕಠಿಣ ಕ್ರಮವನ್ನು ಸ್ವಾಗತಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಈಗ ಬ್ರೇಕ್ ಬಿದ್ದಿದೆ. ಆದರೆ ಇದರ ಜೊತೆಗೆ ಸಣ್ಣ ಪುಟ್ಟ ವ್ಯವಹಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಲಾರಿ ಮಾಲಕ ಚಾಲಕರಿಗೆ ಸಮಸ್ಯೆ ಶುರುವಾಗಿದೆ ಎಂದರು.
ಇನ್ನು ಈ ಬಗ್ಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗೆ ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸಲಾಗಿದೆ. ನಾಲ್ಕು ದಿನಗಳ ಒಳಗೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.