ಮಂಗಳೂರು, ಅ 01 (DaijiworldNews/AK):ನಗರದಲ್ಲಿ ಖಾಸಗಿ ಬಸ್ ಸೇವೆಯ ಮಾಲೀಕರು ಅಕ್ಟೋಬರ್ 1 ರ ಭಾನುವಾರದಂದು ತಮ್ಮ ಅಪಾರ್ಟ್ಮೆಂಟ್ನಲ್ಲಿ ತಮ್ಮ ಜೀವನವನ್ನು ಕೊನೆಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಮಹೇಶ್ ಮೋಟಾರ್ಸ್ ಮಾಲೀಕ ಪ್ರಕಾಶ್ ಶೇಕ (40) ಮೃತ ವ್ಯಕ್ತಿ.
ಕದ್ರಿ ಕಂಬಳ ಸಮೀಪದ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಆತ್ಮಹತ್ಯೆಗೆ ಕಾರಣ ಮತ್ತು ಆತ್ಮಹತ್ಯೆ ಮಾಡಿಕೊಂಡ ರೀತಿ ಇನ್ನೂ ತಿಳಿದುಬಂದಿಲ್ಲ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹೇಶ್ ಮೋಟಾರ್ಸ್ಗೆ ಸೇರಿದ ಅನೇಕ ಸಿಟಿ ಬಸ್ಗಳು ಪ್ರತಿದಿನ ಸಂಚರಿಸುತ್ತಿದ್ದು, ಪ್ರಯಾಣಿಕರಲ್ಲಿ ಜನಪ್ರಿಯವಾಗಿದೆ.
ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಪ್ರಕಾಶ್ ಅವರ ಅಕಾಲಿಕ ನಿಧನಕ್ಕೆ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಬಸ್ ಮಾಲಕರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ, ಉದ್ಯಮಿ, ಸಮಾಜ ಸೇವಕರು ಮತ್ತು ದಾನಿಗಳಾಗಿ ಗುರುತಿಸಿಕೊಂಡಿದ್ದ ಪ್ರಕಾಶ್ ಶೇಖ ಅವರು ಸ್ಫೂರ್ತಿಯ ಚಿಲುಮೆಯಾಗಿದ್ದರು. ಇವರ ಅಗಲಿಕೆ ಬಸ್ ಮಾಲಕರ ಸಂಘಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಬಸ್ ಮಾಲಕರ ಸಂಘದ ಅಧ್ಯಕ್ಷ ಪರ್ತಿಪ್ಪಾಡಿ ಮತ್ತು ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821