ಮಂಗಳೂರು, ಅ 02 (DaijiworldNews/MS): ಶಿವಮೊಗ್ಗದಲ್ಲಿ ನಡೆದ ಕಲ್ಲು ತೂರಾಟ ಘಟನೆಯ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ. ಈದ್ ಮೆರವಣಿಗೆಯಲ್ಲಿ ಹಿಂದೂಗಳ ಅಂಗಡಿ, ಮನೆಗಳ ಮೇಲೆ ದಾಳಿಯಾಗಿದೆ. ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಮಂಗಳೂರಿನಲ್ಲಿ ಸೋಮವಾರ ಮಾಧ್ಯಮದೊಂದಿಗೆ ಶಿವಮೊಗ್ಗ ಈದ್ ಮಿಲಾದ್ ಸಂಘರ್ಷವನ್ನ ಖಂಡಿಸುತ್ತೇನೆ.ಗಣೇಶ ಚತುರ್ಥಿ ಯಾವುದೇ ಗಲಾಟೆ ನಡೆಯದೇ ಶಾಂತಿಯುತವಾಗಿ ನಡೆದಿದೆ. ಆದರೆ ಶಿವಮೊಗ್ಗ ಗಲಾಟೆ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ.ಈದ್ ಮೆರವಣಿಗೆಯಲ್ಲಿ ಹಿಂದೂಗಳ ಅಂಗಡಿ, ಮನೆಗಳ ಮೇಲೆ ದಾಳಿಯಾಗಿದೆ.
ಈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಈ ರೀತಿ ಆಗಿದೆ. ಕಾಂಗ್ರೆಸ್ ವಿಜಯೋತ್ಸವದ ಮೆರವಣಿಗೆಯಲ್ಲಿ ಪಾಕಿಸ್ತಾನದ ಧ್ವಜ ಹಾರಾಡಿದ್ದು, ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿತ್ತು. ಆ ಸಂದರ್ಭ ಯಾವುದೇ ರೀತಿಯ ಕಠಿಣ ಕ್ರಮ ಕೈಗೊಳ್ಳದಿರುವ ಕಾರಣ ಮತಾಂಧ ಶಕ್ತಿಗಳು ಮತ್ತೆ ತಮ್ಮ ಎದ್ದು ನಿಂತಿವೆ ಎಂದು ಆರೋಪಿಸಿದ್ದಾರೆ.
ಕುಕ್ಕರ್ ಬಾಂಬ್ ನಲ್ಲೂ ಶಿವಮೊಗ್ಗದ ನಂಟಿದೆ. ಭಟ್ಕಳ ಬ್ರದರ್ಸ್ ರೀತಿಯಲ್ಲಿ ತೀರ್ಥಹಳ್ಳಿ ಬ್ರದರ್ಸ್ ಮೂಲಕ ಚಟುವಟಿಕೆ ಆಗುತ್ತಿದೆ. ರಾಜ್ಯದಲ್ಲಿ ಗೃಹ ಸಚಿವರು ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಮುಖ್ಯಮಂತ್ರಿ ಮತ ಬೇಟೆಗಾಗಿ ಇಂತಹ ಭಯೋತ್ಪದನಾ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಫಲರಾಗಿದ್ದಾರೆ. ಹಿಂದೆ ಪ್ರವೀಣ್ ನೆಟ್ಟಾರು, ಹರ್ಷ ಹತ್ಯೆ ಎನ್ ಐಎ ತನಿಖೆ ಮೂಲಕ ಕಠಿಣ ಕ್ರಮ ವಹಿಸಲಾಗಿತ್ತು. ಡಿಜೆ ಹಳ್ಳಿ, ಕೆಜೆ ಹಳ್ಳಿ, ಹುಬ್ಬಳ್ಳಿ ಗಲಾಟೆ ಸಂದರ್ಭದಲ್ಲಿ ಬಿಜೆಪಿ ಸರಕಾರ ಕಠಿಣ ಕ್ರಮ ವಹಿಸಿದ್ದ ಕಾರಣ ಇಂತಹ ಆತಂಕವಾದ ಹತೋಟಿಗೆ ಬಂದಿತ್ತು ಎಂದವರು ಹೇಳಿದ್ದಾರೆ.