ಬೆಳ್ತಂಗಡಿ, ಅ 04 (DaijiworldNews/MS): ಪಕ್ಷದ ಆದೇಶ ಉಲ್ಲಂಘಿಸಿದ ಹಿನ್ನಲೆಯಲ್ಲಿ ಪಕ್ಷದ ಜವಾಬ್ದಾರಿ ಹೊಂದಿರುವ ನೆರಿಯ ಬೂತ್ ಸಮಿತಿ ಅಧ್ಯಕ್ಷರು ಸೇರಿ ಮೂವರನ್ನು ಎಲ್ಲಾ ಹುದ್ದೆ ಹಾಗೂ ಜವಾಬ್ದಾರಿಗಳಿಂದ ಮುಕ್ತಗೊಳಿಸಿರುವುದಾಗಿ ಬೆಳ್ತಂಗಡಿ ಬಿಜೆಪಿ ತಿಳಿಸಿದೆ.
ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಪಕ್ಷದ ಈ ಕ್ರಮ ಕೈಗೊಂಡಿದೆ.
ಪಕ್ಷದ ಜವಾಬ್ದಾರಿಯನ್ನು ಹೊಂದಿರುವ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಶ್ರೀಮತಿ ವಸಂತಿ ಕಡ್ಡಿಬಾಗಿಲು ಮನೆ, ನೆರಿಯ ಗ್ರಾಮದ ಬೂತ್ ಸಮಿತಿ ಅಧ್ಯಕ್ಷರು ಹಾಗೂ ನೆರಿಯ ಗ್ರಾಮ ಪಂಚಾಯತ್ ಸದಸ್ಯರಾಗಿರುವ ಶ್ರೀಮತಿ ಕುಶಾಲ ಕಡ್ಡಿಬಾಗಿಲು ಮನೆ, ನೆರಿಯ ಗ್ರಾಮ ಬೂತ್ ಸಮಿತಿ ಅಧ್ಯಕ್ಷರು ಹಾಗೂ ನೆರಿಯ ಗ್ರಾಮ ಪಂಚಾಯತ್ ಸದಸ್ಯರಾಗಿರುವ ಸಚಿನ್ ಕುಲೆನಾಡಿ ಮನೆ ಇವರನ್ನು ತಕ್ಷಣದಿಂದ ಅನ್ವಯವಾಗುವಂತೆ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಹುದ್ದೆ ಹಾಗೂ ಜವಾಬ್ದಾರಿಗಳಿಂದ ಮುಕ್ತಗೊಳಿಸಿರುವುದಾಗಿ ಬೆಳ್ತಂಗಡಿ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.